ದುರಾಸೆಯೇ ಭ್ರಷ್ಟಾಚಾರದ ಮೂಲ – ಶಿವಮೊಗ್ಗದಲ್ಲಿ ಸಂತೋಷ್ ಹೆಗ್ಡೆ
February 27 : ಶಿವಮೊಗ್ಗದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಧ್ವನಿ ಸಂಸ್ಥೆ ಮಂಡ್ಯ ಜಿಲ್ಲಾ ಘಟಕಗಳು ಆಯೋಜಿಸಿದ್ದ ‘ವಿಶ್ವ ಸಾಮಾಜಿಕ ನ್ಯಾಯ ಮತ್ತು ಹೆಣ್ಣುಮಕ್ಕಳ ಹಕ್ಕುಗಳು: ಕಾನೂನು ಅರಿವು’ ಕಾರ್ಯಾಗಾರವನ್ನು ಉದ್ಘಾಟಿಸಿ ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರು ಉದ್ಘಾಟಿಸಿ ಮಾತನಾಡಿದರು. ದುರಾಸೆ, ಭ್ರಷ್ಟಾಚಾರ ಮಾಡಿ ಸಂಪತ್ಭರಿತರಾದವರು ಇನ್ನಷ್ಟು ಲಂಚ ಪಡೆಯುವುದು, ಸೋಮಾರಿತನ ಬೆಳೆಸುವುದು, ಅಧಿಕಾರ ಕೊಂಡುಕೊಳ್ಳುವುದು ಸೇರಿದಂತೆ ಎಲ್ಲ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ ಎಂದರು.

